BPL ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಬಂಪರ್ ಗಿಫ್ಟ್ ಒನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಮೈಕ್ರೋ ಸಾಲ ಯೋಜನೆ ಪಡೆಯಿರಿ..!! - Karnataka's Best News Portal

ಕರ್ನಾಟಕ ಸರ್ಕಾರ ವತಿಯಿಂದ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರ ಚಟುವಟಿಕೆಗಳನ್ನು ಮಾಡುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ. ನೀವು ಯಾವುದೇ ಸಣ್ಣ ಪುಟ್ಟ ವ್ಯಾಪಾರ ಹಾಗೂ ಅಂಗಡಿ ಇತರೆ ಕೆಲಸಗಳನ್ನು ಮಾಡುತ್ತಿದ್ದರೆ ಸರ್ಕಾರದಿಂದ ಹತ್ತು ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೈಕ್ರೋ ಸಾಲ ಯೋಜನೆಯಿಂದ ಈ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಯೋಜನೆಗೆ ಅರ್ಜಿ ಹಾಕಬೇಕಾದರೆ ಕನಿಷ್ಠ 25 ವರ್ಷ ಆಗಿರಬೇಕು ಹಾಗೂ ಗರಿಷ್ಠ ವರ್ಷದ 50 ವರ್ಷದ ಒಳಗೆ ವಯೋಮಿತಿ ಇರಬೇಕು ಹಾಗೂ ನೀವು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮಹಿಳೆ ಆಗಿರಬೇಕು. ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಹೊಸದಾಗಿ ಯಾವುದಾದರೂ ಸಣ್ಣ ಪುಟ್ಟ ವ್ಯಾಪಾರ ಮಾಡಬೇಕು ಅಂತ ತಿಳಿದುಕೊಂಡಿರುವವರು ಕೂಡ ಅರ್ಜಿ ಸಲ್ಲಿಸಬಹುದು.

ತರಕಾರಿ ಹೂವು ಹಣ್ಣು ತಳ್ಳುವ ಗಾಡಿ ಈ ರೀತಿಯ ವ್ಯಾಪಾರಿಗಳು ಕೂಡ ಈ ಯೋಜನೆ ಅರ್ಜಿ ಸಲ್ಲಿಸಬಹುದು. ಈ ಯೋಜನೆ ಮೂಲಕ ನಿಮಗೆ ಹತ್ತು ಸಾವಿರ ರೂಪಾಯಿಗಳ ಸಾಲವನ್ನು ನೀಡುತ್ತದೆ ಎರಡು ಸಾವಿರ ರೂಪಾಯಿಗಳನ್ನು ಸಹಾಯಧನವಾಗಿ ನೀಡುತ್ತಾರೆ. ಉಳಿದ ಎಂಟು ಸಾವಿರ ರೂಪಾಯಿಗಳನ್ನು ಮಾತ್ರ ನೀವು ಕಟ್ಟಬೇಕಾಗುತ್ತದೆ ಇನ್ನೂ ಅರ್ಜಿಯನ್ನು ಸಲ್ಲಿಸಲು ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಫೋಟೋ, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕಾಗಿರುತ್ತದೆ. ಆನ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ ಕೊನೆ ದಿನಾಂಕ 10-12-2020 ಈ ದಿನಾಂಕದ ಒಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ ನಂತರ ಪ್ರಿಂಟ್ ಔಟ್ ತೆಗೆದು ನಿಮ್ಮ ಬಳಿ ಇರುವ ದಾಖಲಾತಿಗಳನ್ನು ಇದರ ಜೊತೆಗೆ ಅಟ್ಯಾಚ್ ಮಾಡಿಸಿ ನಿಮ್ಮ ತಾಲೂಕಿನಲ್ಲಿರುವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕಚೇರಿಗೆ ಇದನ್ನು 21/12/2020 ರ ಒಳಗೆ ನೀಡಬೇಕು.

By admin

Leave a Reply

Your email address will not be published. Required fields are marked *