ಮೇಷ ರಾಶಿ:- ನಿಮ್ಮ ದೊಡ್ಡ ಸಮಸ್ಯೆಗೆ ಈ ದಿನ ಪರಿಹಾರ ಸಿಗ ಬಹುದು. ವ್ಯಾಪಾರಸ್ಥರು ನೀವು ಮಾಡುವ ಕೆಲಸವನ್ನು ಆತುರದಿಂದ ಮಾಡಬೇಡಿ ಮತ್ತು ನಿಮ್ಮ ನಿರ್ಧಾರವನ್ನು ಕೂಡ ಅವಸರದಿಂದ ತೆಗೆದುಕೊಳ್ಳಬೇಡಿ. ಮನೆಯ ವಾತಾವರಣ ಈ ದಿನ ಉತ್ತಮವಾಗಿರು ತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 6:00 ಯಿಂದ 7:30ರ ವರೆಗೆ.
ವೃಷಭ ರಾಶಿ:- ಆದಷ್ಟು ನಿಮ್ಮ ವ್ಯರ್ಥ ಖರ್ಚನ್ನು ತಪ್ಪಿಸಬೇಕು. ಮತ್ತು ನಿಮ್ಮ ಆದಾಯದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ವ್ಯಾಪಾರಿ ಗಳಿಗೆ ಇಂದು ಉತ್ತಮ ದಿನವಾಗಿರುತ್ತದೆ. ನೀವು ಇಂದು ನಿರೀಕ್ಷೆಗೆ ತಕ್ಕಂತೆ ಲಾಭ ಪಡೆಯುವ ಸಾಧ್ಯತೆ ಇರುತ್ತದೆ. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿ ಇರುತ್ತದೆ. ಹಣಕಾಸಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 6:00ಯಿಂದ 9 ಗಂಟೆಯವರೆಗೆ.
ಮಿಥುನ ರಾಶಿ:- ಇಂದು ಹಣದ ದೃಷ್ಟಿಯಿಂದ ಉತ್ತಮ ದಿನವಾಗಿರು ತ್ತದೆ. ಈ ಹಿಂದೆ ಮಾಡಿದ ಸಾಲವನ್ನು ಈ ದಿನ ಮರುಪಾವತಿಸುವ ಸಾಧ್ಯತೆ ಇದೆ. ಕೆಲಸ ಮಾಡುತ್ತಿರುವ ಜನರಿಗೆ ಸಕಾರಾತ್ಮಕ ಫಲಿತಾಂಶ ಸಿಗುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಸಾಮಾನ್ಯ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 6:30 ರಿಂದ ರಾತ್ರಿ 9 ಗಂಟೆಯವರೆಗೆ.

ಕಟಕ ರಾಶಿ:- ಇಂದು ನೀವು ಸಕಾರಾತ್ಮಕ ಭಾವನೆಯನ್ನು ಹೊಂದಿರು ತ್ತೀರಿ. ಈ ದಿನ ಹೆಚ್ಚು ಉತ್ಸಾಹದಿಂದ ಸಂತೋಷದಿಂದ ಇರುತ್ತೀರಿ. ಬಾಕಿ ಇರುವ ಕೆಲಸವನ್ನು ಈ ದಿನ ಪೂರ್ಣಗೊಳಿಸುವುದಕ್ಕೆ ಪ್ರಯತ್ನ ಮಾಡಿ. ವ್ಯಾಪಾರಸ್ಥರು ಹಣಕಾಸಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಗಳನ್ನು ತೆಗೆದುಕೊಳ್ಳದೆ ಇರುವುದು ಉತ್ತಮ. ಈ ದಿನ ಉತ್ತಮವಾದ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:30ವರೆಗೆ.
ಸಿಂಹ ರಾಶಿ:- ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ವಿದ್ಯಾರ್ಥಿಗಳು ಈ ದಿನ ಹೆಚ್ಚು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಒತ್ತಡ ಇರುತ್ತದೆ. ಕುಟುಂಬದ ಸದಸ್ಯರೊಂದಿಗೆ ವಾದ ಮಾಡಲು ಹೋಗಬೇಡಿ. ಸಹ ಉದ್ಯೋಗಿಗಳೊಂದಿಗೆ ಸಮಯ ಕಳೆಯುವುದನ್ನು ತಪ್ಪಿಸಬೇಕು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 7:30 ರಿಂದ ರಾತ್ರಿ 9 ಗಂಟೆಯವರೆಗೆ.
ಕನ್ಯಾ ರಾಶಿ:- ಹಣಕ್ಕೆ ಸಂಬಂಧಿಸಿದ ಚಿಂತೆಗಳಿಗೆ ಪರಿಹಾರ ಸಿಗುತ್ತದೆ. ಉದ್ಯೋಗಿಗಳು ಉನ್ನತ ಅಧಿಕಾರಿಗಳ ಬೆಂಬಲವನ್ನು ಪಡೆಯುತ್ತಾರೆ. ದಿನದ ಅರ್ಧದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ ಸಿಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಿಗ್ಗೆ 7:30ರಿಂದ ಮಧ್ಯಾಹ್ನ 12:30 ವರೆಗೆ.
ತುಲಾ ರಾಶಿ:- ಕೆಲಸದಲ್ಲಿ ಇಂದು ನಿಮಗೆ ತುಂಬಾ ಉತ್ತಮವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಎಲ್ಲಾ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆಯನ್ನು ನೋಡಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ.
ವೃಶ್ಚಿಕ ರಾಶಿ:- ಮನೆಯ ವಾತಾವರಣ ಈ ದಿನ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರ ಮಾಡುತ್ತಿರುವಂತಹ ಜನರು ಆರ್ಥಿಕ ಲಾಭ ಪಡೆಯಬೇಕು ಎಂದರೆ ಹೆಚ್ಚು ಶ್ರಮ ವಹಿಸಬೇಕಾಗುತ್ತದೆ. ಆರ್ಥಿಕ ಸಮಸ್ಯೆಯಿಂದ ಮನಸ್ಸಿಗೆ ಯೋಚನೆಗಳು ಹೆಚ್ಚಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಧನಸ್ಸು ರಾಶಿ:- ವ್ಯಾಪಾರ ಮಾಡುವಂತಹ ಜನರು ಈ ದಿನ ಹೆಚ್ಚು ಲಾಭವನ್ನು ಪಡೆಯುತ್ತಾರೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅದರಿಂದ ಹೆಚ್ಚಿನ ಲಾಭ ಬರುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗಿರುತ್ತದೆ. ಮಕ್ಕಳೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 7:30 ರವರೆಗೆ.
ಮಕರ ರಾಶಿ:- ವ್ಯಾಪಾರ ಮಾಡುತ್ತಿರುವಂತಹ ಜನರು ಆರ್ಥಿಕ ಲಾಭ ಪಡೆಯಬೇಕು ಎಂದರೆ ಹೆಚ್ಚು ಶ್ರಮ ವಹಿಸಬೇಕಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿರುವಂತಹ ಜನರು ಈ ದಿನ ನಿರೀಕ್ಷೆಗೆ ತಕ್ಕ ಫಲಿತಾಂಶವನ್ನು ಪಡೆಯಬಹುದು. ಪಾಲುಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದರೆ ಅಲ್ಲಿ ಕೆಲವೊಂದಷ್ಟು ಬದಲಾವಣೆಯಾಗುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12:30 ವರೆಗೆ.
ಕುಂಭ ರಾಶಿ:- ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ಆದರೆ ಬಜೆಟ್ ಪ್ರಕಾರ ಖರ್ಚು ಮಾಡುವಂತೆ ಸೂಚಿಸಲಾಗಿದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಿಗ್ಗೆ 6:00ಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಮೀನ ರಾಶಿ:- ಉದ್ಯೋಗ ಹುಡುಕುತ್ತಿರುವ ಜನರಿಗೆ ಈ ದಿನ ಅದೃಷ್ಟದ ದಿನವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮ ಈ ದಿನ ಯಶಸ್ವಿಯಾಗ ಬಹುದು. ಕೆಲಸ ಮಾಡುತ್ತಿರುವವರಿಗೆ ಕಚೇರಿಯಲ್ಲಿ ಇಂದು ಒತ್ತಡ ಹೆಚ್ಚಾಗಬಹುದು. ಹೋಟೆಲ್ ವ್ಯಾಪಾರ ಮಾಡುವವರು ಹೆಚ್ಚು ಸ್ವಚ್ಛತೆಯನ್ನು ಕಾಪಾಡಿ ಇಲ್ಲದಿದ್ದರೆ ದೊಡ್ಡ ನಷ್ಟವನ್ನು ಅನುಭವಿಸ ಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾನ 2 ಗಂಟೆಯಿಂದ ಸಂಜೆ 5:00 ವರೆಗೆ.