ಮೇಷ ರಾಶಿ:- ನೀವೇನಾದರೂ ಸಾಲವನ್ನು ಪಡೆದುಕೊಂಡಿದ್ದರೆ ಅದನ್ನು ಬೇಗ ಮರುಪಾವತಿಸಲು ಪ್ರಯತ್ನಿಸಿ. ಉದ್ಯೋಗಿಗಳಿಗೆ ಕಾರ್ಯ ನಿರಂತರ ದಿನವಾಗಿರುತ್ತದೆ. ಈದಿನ ಕಚೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಇರುತ್ತದೆ. ನಿಮ್ಮ ಯಾವುದೇ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ
ವೃಷಭ ರಾಶಿ:- ಈದಿನ ಪ್ರತಿಕೂಲ ಸಂದರ್ಭದಲ್ಲಿ ಆದಷ್ಟು ತಾಳ್ಮೆಯಿಂದ ಇರಿ. ಕಚೇರಿಯಲ್ಲಿ ನಿಮ್ಮ ಪ್ರಮುಖ ಕೆಲಸದಲ್ಲಿ ಅಡಚಣೆ ಇರಬಹುದು. ಬಹುಶಹ ಹಿರಿಯ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳುತ್ತಾರೆ. ವ್ಯಾಪಾರಸ್ಥರು ಎಂದು ವ್ಯಾಪಾರ ಮಾಡುವಾಗ ಆದಷ್ಟು ಚರ್ಚೆಯಿಂದ ದೂರ ಇರುವಂತೆ ಸೂಚಿಸಲಾಗಿದೆ. ಮನೆಯ ಹಿರಿಯರ ಆಶೀರ್ವಾದ ವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ -ನೀಲಿ ಬಣ್ಣ ಸಮಯ – ಸಂಜೆ 7:30ರಿಂದ ರಾತ್ರಿ 8 ಗಂಟೆಯವರೆಗೆ.
ಮಿಥುನ ರಾಶಿ:- ವ್ಯಾಪಾರಸ್ಥರು ಈ ದಿನ ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕ ಬಹುದು. ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ. ಇಂದು ಹಣದ ದೃಷ್ಟಿಯಿಂದ ದುಬಾರಿಯ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5:00 ವರೆಗೆ.
ಕಟಕ ರಾಶಿ:- ನಿಮ್ಮ ಪ್ರಮುಖ ಕೆಲಸಗಳು ಮಧ್ಯದಲ್ಲಿ ನಿಂತು ಹೋಗಿದ್ದರೆ ಅದನ್ನು ಈ ದಿನ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಇಂದು ಕಚೇರಿಯಲ್ಲಿ ಸಹ ಉದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಕಾಪಾಡಿಕೊಳ್ಳಿ. ಅಧಿಕಾರಿಗಳು ನಿಮಗೆ ವಹಿಸಿದ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಬೆಳಗ್ಗೆ 6:30 ರಿಂದ ಮಧ್ಯಾಹ್ನ 12:30 ವರೆಗೆ.
ಸಿಂಹ ರಾಶಿ:- ಈ ದಿನ ಕಚೇರಿಯ ವಾತಾವರಣ ಚೆನ್ನಾಗಿರುತ್ತದೆ. ಇಂದು ಸಹ ಉದ್ಯೋಗಿಗಳು ನಿಮಗೆ ಸಹಾಯವನ್ನು ಮಾಡುತ್ತಾರೆ. ಇಂದು ನಿಮ್ಮ ಎಲ್ಲ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕನ್ಯಾ ರಾಶಿ:- ಈ ದಿನ ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಿ. ಅನಗತ್ಯ ಚರ್ಚೆ ಮಾಡುವುದ ರಿಂದ ಆದಷ್ಟು ದೂರ ಇರಿ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ದಿನ ಕಷ್ಟಕರ ದಿನವಾಗಿರುತ್ತದೆ. ಈ ದಿನ ಕೆಲಸದ ಹೊರೆ ಹೆಚ್ಚಿರುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ತುಲಾ ರಾಶಿ:- ಈ ದಿನ ಧಾರ್ಮಿಕ ಆಚರಣೆಯ ಬಗ್ಗೆ ಆಸಕ್ತಿ ಹೆಚ್ಚಾಗ ಬಹುದು. ಈ ದಿನ ಅಗತ್ಯ ಇರುವವರಿಗೆ ಸಹಾಯ ಮಾಡಬಹುದು. ಇಂದು ಕೆಲಸದಲ್ಲಿ ಸಾಮಾನ್ಯ ದಿನವಾಗಿರುತ್ತದೆ. ಇಂದು ನಿಮ್ಮ ಯಾವುದೇ ಕೆಲಸ ಅಡೆತಡೆ ಇಲ್ಲದೆ ಪೂರ್ಣಗೊಳ್ಳುತ್ತದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:00 ವರೆಗೆ.
ವೃಶ್ಚಿಕ ರಾಶಿ:- ಈ ದಿನ ಯಾವುದಾದರೂ ದೇವಸ್ಥಾನಕ್ಕೆ ಹೋಗಿ ಬಂದು ದಿನವನ್ನು ಪ್ರಾರಂಭಿಸಿ. ನೀವು ಇಡೀ ದಿನ ಆತ್ಮವಿಶ್ವಾಸದಿಂದ ಕೂಡಿರುತ್ತೀರಿ. ಮತ್ತು ಈ ದಿನ ಕಛೇರಿಯಲ್ಲಿ ನಿಮ್ಮ ಕೆಲಸವನ್ನು ಬೇಗನೆ ಮುಗಿಸುತ್ತೀರಿ. ನಿಮ್ಮ ಕಠಿಣ ಪರಿಶ್ರಮದಿಂದ ನೀವು ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಗ್ಗೆ 6:00 ಯಿಂದ ಮಧ್ಯಾನ 1 ಗಂಟೆಯವರೆಗೆ
ಧನಸ್ಸು ರಾಶಿ:- ಇಂದು ವ್ಯಾಪಾರಿಗಳಿಗೆ ಮತ್ತು ಕೆಲಸ ಮಾಡುತ್ತಿರುವವ ರಿಗೆ ಬಹಳ ಅತ್ಯುತ್ತಮ ದಿನವಾಗಿರುತ್ತದೆ. ವ್ಯಾಪಾರ ಕ್ಷೇತ್ರದಲ್ಲಿರುವವ ರಿಗೆ ಈ ದಿನ ಒಳ್ಳೆಯ ಅವಕಾಶಗಳು ಸಿಗಬಹುದು. ಸಿಕ್ಕಿರುವ ಅವಕಾಶದಿಂದ ಸಂಪೂರ್ಣ ಲಾಭವನ್ನು ಪಡೆಯುವುದು ಉತ್ತಮ. ದಾಂಪತ್ಯ ಜೀವನದಲ್ಲಿ ಈ ದಿನ ಸಂತೋಷ ಮತ್ತು ಶಾಂತಿ ಉಳಿಯುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ.
ಮಕರ ರಾಶಿ:- ವ್ಯಾಪಾರಸ್ಥರು ಈದಿನ ಕೆಲವು ಸವಾಲುಗಳನ್ನು ಎದುರಿಸ ಬೇಕಾಗುತ್ತದೆ. ಉದ್ಯಮಿಗಳು ಈ ದಿನ ಆರ್ಥಿಕ ಲಾಭವನ್ನು ಪಡೆಯ ಬಹುದು. ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಇಂದು ಬಗೆಹರಿಯಬಹುದು. ಮನೆಯಲ್ಲಿ ಶಾಂತಿ ಮತ್ತು ಹೊಂದಾಣಿಕೆ ಯನ್ನು ಉಳಿಸಿಕೊಳ್ಳಲು ಕೆಲವು ಬದಲಾವಣೆಯನ್ನು ಮಾಡಿಕೊಳ್ಳ ಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 7:30 ರಿಂದ 10 ಗಂಟೆಯವರೆಗೆ
ಕುಂಭ ರಾಶಿ:- ಈ ದಿನ ಹಣದ ವಿಚಾರವಾಗಿ ಸಂಗಾತಿಯೊಂದಿಗೆ ವಿವಾದವನ್ನು ಹೊಂದಿರುತ್ತೀರಿ. ಮನೆಯ ಸದಸ್ಯರೊಂದಿಗೆ ನಿಮ್ಮ ಸಂಬಂಧವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಪ್ರಯತ್ನಿಸಿ. ಸಣ್ಣ ಸಣ್ಣ ವಿಷಯಗಳ ಮೇಲೆ ನೀವು ವಾದ ಮಾಡುವುದನ್ನು ತಪ್ಪಿಸಿ. ಇಲ್ಲವಾದರೆ ನಿಮ್ಮ ಸಂಬಂಧದಲ್ಲಿ ಬಿರುಕು ಉಂಟಾಗುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ
ಮೀನ ರಾಶಿ:- ಈ ದಿನ ನಿಮ್ಮ ಕೆಲಸದ ಕ್ಷೇತ್ರದಲ್ಲಿ ಉತ್ತಮವಾಗಿ ವರ್ತಿಸಿ. ನಿಮ್ಮ ಸಹ ಉದ್ಯೋಗಿಗಳೊಂದಿಗೆ ಅನಗತ್ಯ ವಾದ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಿ ಕೊಳ್ಳಬಹುದು. ಹಣದ ವಹಿವಾಟು ಮಾಡುವಾಗ ಬಹಳ ಎಚ್ಚರಿಕೆ ವಹಿಸುವುದು ಉತ್ತಮ. ಈ ದಿನ ಮನೆಯ ವಾತಾವರಣ ಶಾಂತವಾಗಿ ಇರುತ್ತದೆ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ.