ದಿನ ಭವಿಷ್ಯ 16 ಜೂನ್ 2023||
ಮೇಷ ರಾಶಿ:- ಕಚೇರಿಯಲ್ಲಿ ನಿಮ್ಮ ಬಾಸ್ ನಿಮಗೆ ಯಾವುದಾದರೂ ಜವಾಬ್ದಾರಿಯ ವಹಿಸಿದ್ದರೆ ಅದನ್ನು ಸರಿಯಾದ ಸಮಯಕ್ಕೆ ಪೂರ್ಣ ಗೊಳಿಸಲು ಪ್ರಯತ್ನಿಸಿ. ನೀವೇನಾದರೂ ಆನ್ಲೈನ್ ನಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ಉತ್ತಮವಾದ ಲಾಭ ಪಡೆಯಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಮಧ್ಯಾನ 1 ಗಂಟೆಯಿಂದ ಸಂಜೆ 4:30ವರೆಗೆ.
ವೃಷಭ ರಾಶಿ:- ನೀವೇನಾದರೂ ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಇಂದು ಒಳ್ಳೆಯ ಅವಕಾಶ ಬರಬಹುದು. ವ್ಯಾಪಾರಸ್ಥರು ಇಂದು ಹಣಕಾಸು ವಿಷಯದಲ್ಲಿ ಹೆಚ್ಚು ಹುಷಾರಾಗಿರಬೇಕಾಗುತ್ತದೆ. ಹಾಗೂ ನಿಮ್ಮ ಯಾವುದೇ ನಿರ್ಧಾರವನ್ನು ಅವಸರವಾಗಿ ತೆಗೆದುಕೊಳ್ಳಬೇಡಿ. ಮನೆಯ ವಾತಾವರಣ ಶಾಂತವಾಗಿ ಇರುತ್ತದೆ. ಈ ದಿನ ನಿಮ್ಮ ಪೋಷಕರೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಮಿಥುನ ರಾಶಿ:- ಆದಷ್ಟು ನಿಮ್ಮ ಕೆಲಸದಲ್ಲಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡುವುದು ಒಳ್ಳೆಯದು. ಉದ್ಯಮಿಗಳಿಗೆ ಈ ದಿನ ಸಾಮಾನ್ಯವಾಗಿರು ತ್ತದೆ. ಈ ದಿನ ಕೆಲಸದ ಹೊರೆ ಹೆಚ್ಚಿರುತ್ತದೆ. ನಿಮ್ಮ ಕೆಲಸವನ್ನು ಸಮಯ ಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಸಣ್ಣ ಉದ್ಯಮಿ ಗಳು ಈ ದಿನ ಉತ್ತಮವಾದ ಅವಕಾಶವನ್ನು ಪಡೆಯಬಹುದು. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12:30 ರವರೆಗೆ.
ಕಟಕ ರಾಶಿ:- ಇಂದು ದೊಡ್ಡ ವ್ಯವಹಾರ ಮಾಡುವ ಅವಕಾಶ ಪಡೆಯಬಹುದು. ಸಣ್ಣ ವ್ಯಾಪಾರಿಗಳು ನಿರೀಕ್ಷೆಗೆ ತಕ್ಕ ಫಲಿತಾಂಶ ಪಡೆಯುವ ಸಾಧ್ಯತೆ ಇದೆ. ಈ ದಿನ ಸರಿಯಾಗಿ ಕೆಲಸ ಮಾಡಿದರೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಈ ದಿನ ಹೆಸರಾಂತ ವ್ಯಕ್ತಿಯನ್ನು ಭೇಟಿ ಮಾಡುವ ಅವಕಾಶ ಸಿಗುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಸಿಂಹ ರಾಶಿ:- ಸಣ್ಣ ವಿಷಯಕ್ಕೂ ಕೋಪಗೊಳ್ಳುವಂತಹ ನಿಮ್ಮ ಮನಸ್ಥಿತಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆಯನ್ನು ಉಂಟು ಮಾಡಬಹುದು. ಹಾಗಾಗಿ ನೀವು ಸಣ್ಣ ಸಣ್ಣ ವಿಷಯಕ್ಕೂ ಕೋಪಗೊಳ್ಳುವುದನ್ನು ಬಿಡಬೇಕಾಗುತ್ತದೆ. ಚಿಲ್ಲರೆ ವ್ಯಾಪಾರಿಗಳಿಗೂ ಈ ದಿನ ಉತ್ತಮವಾದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ.
ಕನ್ಯಾ ರಾಶಿ:- ಈ ದಿನ ನಿಮ್ಮ ಕೆಲಸದ ಬಗ್ಗೆ ಹೆಚ್ಚು ಗಮನಹರಿಸಲು ಸೂಚಿಸಲಾಗಿದೆ. ಇಲ್ಲದಿದ್ದರೆ ನೀವು ಮಾಡುತ್ತಿರುವ ಕೆಲಸದಲ್ಲಿ ತೊಂದರೆ ಉಂಟಾಗಬಹುದು. ಕುಟುಂಬ ಸದಸ್ಯರ ನಡುವೆ ಕೆಲವು ವಾದ ವಿವಾದ ಉಂಟಾಗಬಹುದು. ಮನೆಯ ಹಿರಿಯರ ಭಾವನೆಗಳನ್ನು ನೀವು ಅರ್ಥಮಾಡಿಕೊಳ್ಳಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ತುಲಾ ರಾಶಿ:- ಈ ದಿನ ಕೆಲಸದಲ್ಲಿ ಅತ್ಯುತ್ತಮವಾದದನ್ನು ನೀಡಲು ಪ್ರಯತ್ನಿಸಿ. ವ್ಯಾಪಾರಸ್ಥರು ಇಂದು ಆರ್ಥಿಕ ಲಾಭ ಗಳಿಸಬಹುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಹಾಗೂ ಕುಟುಂಬ ಸದಸ್ಯರ ನಡುವೆ ಉತ್ತಮವಾದ ಬಾಂಧವ್ಯ ಇರುತ್ತದೆ. ಹಣದ ವಿಷಯದಲ್ಲಿ ಈ ದಿನ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಮಧ್ಯಾಹ್ನ 2:30 ರಿಂದ ಸಂಜೆ 5:00 ಗಂಟೆಯವರೆಗೆ.
ವೃಶ್ಚಿಕ ರಾಶಿ:- ಈ ದಿನ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ. ಅದರಲ್ಲೂ ನಿಮ್ಮ ಸುತ್ತಮುತ್ತ ಇರುವ ಜನರೊಂದಿಗೆ ಯಾವುದೇ ವಿವಾದವನ್ನು ಮಾಡಬೇಡಿ. ಅದರಲ್ಲೂ ವಿಶೇಷವಾಗಿ ನಿಮ್ಮ ಕೆಲಸದ ಸ್ಥಳದಲ್ಲಿ ವಿಶೇಷವಾದ ನಡವಳಿಕೆ ಹೊಂದಿರಬೇಕಾಗು ತ್ತದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾದ ದಿನವಾಗಿರು ತ್ತದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಧನಸ್ಸು ರಾಶಿ:- ಈ ದಿನ ಮನೆಯ ಹಿರಿಯರೊಂದಿಗೆ ಹೆಚ್ಚು ಸಮಯ ಕಳೆಯಬಹುದು. ವೈವಾಹಿಕ ಜೀವನದಲ್ಲಿ ಸುಂದರವಾದ ತಿರುವು ಬರಬಹುದು. ಈ ದಿನ ನಿಮ್ಮ ಸಂಗಾತಿಯಿಂದ ಕೆಲವು ಒಳ್ಳೆಯ ಸುದ್ದಿ ಯನ್ನು ಪಡೆಯುವ ಸಾಧ್ಯತೆ ಇದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ಹೆಚ್ಚು ಶ್ರಮಪಟ್ಟು ಕೆಲಸ ಮಾಡುತ್ತೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8 ಗಂಟೆಯವರೆಗೆ.
ಮಕರ ರಾಶಿ:- ಕೆಲಸದಲ್ಲಿ ಇಂದು ಅದೃಷ್ಟದ ದಿನವಾಗಿರುತ್ತದೆ. ವ್ಯಾಪಾರಸ್ಥರು ಉತ್ತಮ ಲಾಭಗಳಿಸಲು ಉತ್ತಮವಾದ ಅವಕಾಶಗಳು ಸಿಗಬಹುದು. ಈ ದಿನ ಹಣಕಾಸಿನ ಪರಿಸ್ಥಿತಿ ಬಲವಾಗಿರುತ್ತದೆ. ಇಂದು ಯಾವುದೇ ಹಣಕಾಸಿನ ವಹಿವಾಟನ್ನು ಮಾಡಬಹುದು. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 8 ಗಂಟೆಯವರೆಗೆ.
ಕುಂಭ ರಾಶಿ:- ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ದಿನ ಸಾಮಾನ್ಯ ದಿನವಾಗಿರುತ್ತದೆ. ನೀವು ಮಾಡುತ್ತಿರುವ ಕೆಲಸದಲ್ಲಿ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ವ್ಯಾಪಾರಸ್ಥರು ಈ ದಿನ ಆರ್ದಿಕ ಲಾಭ ಪಡೆಯಲು ತುಂಬಾ ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಮೀನ ರಾಶಿ:- ಈ ದಿನ ನೀವು ಮಾತನಾಡುವಾಗ ಪದಗಳ ಮೇಲೆ ಹೆಚ್ಚು ನಿಯಂತ್ರಣ ಇಟ್ಟುಕೊಳ್ಳಬೇಕಾಗುತ್ತದೆ. ನಿಮ್ಮ ಕೋಪವನ್ನು ನಿಯಂತ್ರಿ ಸುವಂತೆ ಸೂಚಿಸಲಾಗಿದೆ. ಹಣಕಾಸಿನ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಈ ದಿನ ನಿಮ್ಮ ತಂದೆ ಅಥವಾ ತಾಯಿಯಿಂದ ಹಣಕಾಸನ್ನು ಪಡೆಯುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8 ಗಂಟೆಯವರೆಗೆ.