ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಶುರುವಾಗಿದೆ, ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?…
ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದೆ. ಹಾಗಾಗಿ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷವು ಕೊಟ್ಟಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೊಳಿಸಬೇಕಾದ ಸಮಯ ಇದಾಗಿದೆ. ಪ್ರಮಾಣವಚನ ಸ್ವೀಕರಿದ ದಿನದಂದೇ ನುಡಿದಂತೆ ನಡೆದ ಮುಖ್ಯಮಂತ್ರಿಗಳು ಸಚಿವ ಸಂಪುಟದ ಜೊತೆ ಚರ್ಚಿಸಿ ತಾತ್ವಿಕ ಅನುಮೋದನೆ ನೀಡಿ ಆದೇಶ ಪತ್ರವನ್ನು ಕೂಡ ಹೊರಡಿಸಿದ್ದರು.
ಮುಖ್ಯಮಂತ್ರಿಗಳು ಈಗ ಎಲ್ಲಾ ಯೋಜನೆಗಳಿಗೂ ಕೂಡ ಮಾರ್ಗಸೂಚಿಗಳನ್ನು ಘೋಷಣೆ ಮಾಡಿದ್ದಾರೆ.
ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸುವುದರ ಮೂಲಕ ಅವರನ್ನು ಸ್ವಾವಲಂಬಿಯಾಗಿ ಮಾಡಲು
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನರಿಗೆ ರೂ. 2000 ಯನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಈ ಅನುಕೂಲತೆಗಳನ್ನು ಪಡೆಯಲು ಬೇಕಾದ ಅರ್ಹತಾ ಮನದಂಡಗಳು ಏನು, ಏನೇನು ದಾಖಲೆಗಳನ್ನು ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವುದರ ಬಗ್ಗೆ ಕೂಡ ಆದೇಶ ಪ್ರತಿಯನ್ನು ಹೊರಡಿಸಿದೆ.
ಬಡ ಕುಟುಂಬಗಳ ಮಹಿಳೆಯರಿಗೆ ಹಣಕಾಸಿನ ಭದ್ರ
ನೆರವು ನೀಡಿ ಅವರು ಹಣಕಾಸಿಗೆ ಮತ್ತೊಬ್ಬರ ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಲು, ಈ ಹಣವನ್ನು ಉಪಯೋಗಿಸಿಕೊಂಡು ಅವರ ಮಕ್ಕಳ ಶಿಕ್ಷಣ ಅಥವಾ ಅವರಿಗೆ ಪೋಷಕಾಂಶಯುಕ್ತ ಆಹಾರ ನೀಡಲು ಅನುವಾಗಲಿ ಮನದಟ್ಟು ಮಾಡಿಕೊಂಡು ಕಾಂಗ್ರೆಸ್ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆ ಜಾರಿಗೆ ಬಂದರೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾಭಿಮಾನ ಹೆಚ್ಚಾಗುತ್ತದೆ ಎನ್ನುವುದು ಸರ್ಕಾರದ ನಂಬಿಕೆ. ಈ ರೀತಿ ಸಹಾಯಧನ ನೀಡಿ ಲಿಂಗ ಸಮಾನತೆಯನ್ನು
ಎತ್ತಿ ಹಿಡಿಯಲು ಸರ್ಕಾರ ನಿರ್ಧರಿಸಿದೆ. ಇದರ ಪ್ರಕಾರ ಕರ್ನಾಟಕದಲ್ಲಿರುವ ಮಹಿಳೆಯರು ಮಾತ್ರ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕರ್ನಾಟಕದ ಯಾವುದೇ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯದೆ ಇದ್ದಲ್ಲಿ ಮತ್ತು ಸರ್ಕಾರಿ ಹುದ್ದೆಯನ್ನು ಹೊಂದಿಲ್ಲದೆ ಇದ್ದ ಪಕ್ಷದಲ್ಲಿ ವಾರ್ಷಿಕ ಆದಾಯ 2,000 ಒಳಗಿದ್ದಲ್ಲಿ ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಕರ್ನಾಟಕ ಶಾಶ್ವತ ನಿವಾಸಿ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಮಾಹಿತಿ ಮತ್ತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು, ಇತ್ತೀಚಿನ ಭಾವಚಿತ್ರವನ್ನು ಅಗತ್ಯ ದಾಖಲೆಯಾಗಿ ಕೊಡುವ ಮೂಲಕ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಒಂದನ್ನು ಸರ್ಕಾರ ಬಿಡುಗಡೆ ಮಾಡಿದ್ದು gruhalakshmi.karatakaka.gov.in. ಪೋರ್ಟಲ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು ಅಥವಾ ಹತ್ತಿರದಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಮೇಲೆ ಕೇಳಲಾದ ಅಗತ್ಯ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಬಹುದು. ಇಲ್ಲವಾದಲ್ಲಿ ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.