ಮೇಷ ರಾಶಿ:- ಇಂದು ಕಠಿಣ ಶ್ರಮದಿಂದ ಉತ್ತಮ ಯಶಸ್ಸನ್ನು ಪಡೆಯಬಹುದು. ವ್ಯಾಪಾರ ಮಾಡಿದರೆ ಉತ್ತಮವಾದ ಲಾಭಗಳಿಸುವ ಅವಕಾಶ ಸಿಗುತ್ತದೆ. ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ. ಉದ್ಯೋಗಸ್ಥರು ಬಾಕಿ ಇರುವ ಎಲ್ಲ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00 ಗಂಟೆಯಿಂದ ರಾತ್ರಿ 7.30 ರವರೆಗೆ.
ವೃಷಭ ರಾಶಿ:- ಇಂದು ಸಾಕಷ್ಟು ಖಿನ್ನತೆ ಮತ್ತು ತೊಡಕುಗಳನ್ನು ಅನುಭವಿಸುತ್ತೀರಿ. ನಿಮ್ಮ ಮೇಲೆ ಹೆಚ್ಚಿನ ಕೆಲಸದ ಹೊರೆ ಹಾಕುವು ದನ್ನು ತಪ್ಪಿಸಿ. ಇದು ನಿಮ್ಮ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ. ಪೋಷಕರು ತಾಳ್ಮೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ. ನೀವು ಹೊಸ ವ್ಯಾಪಾರವನ್ನು ಶುರು ಮಾಡಿದ್ದರೆ ಪ್ರಚಾರದ ಕಡೆ ಹೆಚ್ಚಿನ ಗಮನ ವಹಿಸಬೇಕಾಗುತ್ತದೆ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:00 ಇಂದ ರಾತ್ರಿ 8 ಗಂಟೆಯವರೆಗೆ.
ಮಿಥುನ ರಾಶಿ:- ನೀವೇನಾದರೂ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿ ದ್ದರೆ ಇಂದು ಬಹಳ ಮುಖ್ಯವಾದ ದಿನವಾಗಿರುತ್ತದೆ. ನಿಮಗೆ ಬೇಕಾದ ಕಡೆ ವರ್ಗಾವಣೆ ಪಡೆಯುವ ಸಾಧ್ಯತೆ ಇದೆ. ನೀವು ಸಾಕಷ್ಟು ಪರಿಶ್ರಮ ಪಟ್ಟು ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಮೇಲಾಧಿಕಾರಿಗಳು ನಿಮ್ಮ ಮೇಲೆ ಹೆಚ್ಚಿನ ಗಮನ ಹರಿಸಿರುತ್ತಾರೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಿಗ್ಗೆ 6:30 ರಿಂದ ಮಧ್ಯಾಹ್ನ 1:30 ರವರೆಗೆ.
ಕಟಕ ರಾಶಿ:- ನೀವೇನಾದರೂ ಮಾರ್ಕೆಟ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿ ದ್ದರೆ ಇಂದು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಈ ದಿನ ನೀವು ತುಂಬಾ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಸಂಗಾತಿಯೊಂದಿಗಿನ ಸಂಬಂಧವನ್ನು ಸುಧಾರಿಸಲು ಪ್ರಯತ್ನಿಸಿ. ನಿಮ್ಮ ದಾರಿಯಲ್ಲಿ ಬರುವ ಎಲ್ಲಾ ಆಡಚಣೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ.
ಸಿಂಹ ರಾಶಿ:- ಈ ದಿನ ನಿಮ್ಮ ಎಲ್ಲಾ ಗಮನವು ನಿಮ್ಮ ಆರ್ಥಿಕ ಪರಿಸ್ಥಿತಿಯ ಮೇಲೆ ಇರುತ್ತದೆ. ಈ ದಿನ ನಿಮ್ಮ ಯೋಜನೆಯನ್ನು ಬದಲಾಯಿಸಬಹುದು ಆದರೆ ಈ ಅವಧಿಯಲ್ಲಿ ಬೇರೆಯವರಿಂದ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ ನಿಮ್ಮ ಮೇಲೆ ಒತ್ತಡ ಹೆಚ್ಚಾಗಬಹುದು. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ.
ಕನ್ಯಾ ರಾಶಿ:- ಈ ದಿನ ನೀವು ನಿಮ್ಮ ಸಮಯಕ್ಕೆ ಗೌರವವನ್ನು ಕೊಡಬೇಕು. ಹಾಗೂ ಸಮಯವನ್ನು ವ್ಯರ್ಥ ಮಾಡಬೇಡಿ. ಕೆಲಸದಲ್ಲಿ ಈ ದಿನವೂ ಉತ್ತಮವಾಗಿರುತ್ತದೆ. ಈ ದಿನ ಕಷ್ಟಪಟ್ಟು ಕೆಲಸವನ್ನು ಮಾಡಬೇಕಾಗುತ್ತದೆ. ಕಚೇರಿಯಲ್ಲಿ ಅನಗತ್ಯವಾಗಿ ಚರ್ಚಿಸುವುದನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 12:30 ವರೆಗೆ.
ತುಲಾ ರಾಶಿ:- ವ್ಯಾಪಾರಸ್ಥರು ಇಂದು ಹಣಕಾಸು ವಿಷಯದಲ್ಲಿ ಸ್ವಲ್ಪ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ನೀವೇನಾದರೂ ಸಾಲ ತೆಗೆದುಕೊಳ್ಳಬೇಕು ಎಂದು ಯೋಚಿಸುತ್ತಿದ್ದರೆ ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ವಿಪರೀತವಾಗಿ ಸಾಲ ಮಾಡುವುದನ್ನು ತಪ್ಪಿಸಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಕಹಿ ಹೆಚ್ಚಾಗಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 11:30ವರೆಗೆ.
ವೃಶ್ಚಿಕ ರಾಶಿ:- ಹಣದ ವಿಷಯದಲ್ಲಿ ಈ ದಿನ ಮಿಶ್ರಫಲವಾದ ದಿನ ವಾಗಿರುತ್ತದೆ. ನಿಮ್ಮ ಆದಾಯವು ಹೆಚ್ಚಾಗಬೇಕು ಆದರೆ ನಿಮ್ಮ ಕರ್ಚನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ. ಹಾಗೂ ಹಣದ ವಿಚಾರವಾಗಿ ಇಂದು ನಿಮ್ಮ ಸಂಗಾತಿಯೊಂದಿಗೆ ವಾದ ಉಂಟಾಗ ಬಹುದು. ಮನೆಯ ಹಿರಿಯರ ಆರೋಗ್ಯದ ಕಡೆ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ.
ಧನಸ್ಸು ರಾಶಿ:- ಈ ದಿನ ನಿಮ್ಮ ಕೆಲಸದ ಕಡೆ ಹೆಚ್ಚು ಗಮನ ಕೊಡಬೇಕು. ಹಾಗೂ ಈ ಸಮಯದಲ್ಲಿ ನಿಮ್ಮ ಸಣ್ಣ ಕೆಲಸವನ್ನು ಸಹ ಬಹಳ ಎಚ್ಚರಿಕೆ ಯಿಂದ ಮಾಡಬೇಕು. ಇದಲ್ಲದೆ ಯಾವುದೇ ಕೆಲಸವನ್ನು ಅಪೂರ್ಣ ವಾಗಿ ಕೈ ಬಿಡಬೇಡಿ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು ಕಷ್ಟಪಟ್ಟು ಕೆಲಸ ಮಾಡಿದರೆ ಉತ್ತಮ ಲಾಭ ಪಡೆಯಬಹುದು. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8 ಗಂಟೆಯವರೆಗೆ.
ಮಕರ ರಾಶಿ:- ಇಂದು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾ ವಣೆಗಳು ಆಗುವ ಸಾಧ್ಯತೆ ಇದೆ. ಸಕಾರಾತ್ಮಕ ಫಲಿತಾಂಶಗಳ ಪ್ರಯೋಜನ ಪಡೆಯುವುದರಿಂದ ಹೆಚ್ಚು ಚಿಂತೆ ಮಾಡುವ ಅಗತ್ಯ ಇಲ್ಲ. ನಿಮ್ಮ ನಿರ್ಧಾರವನ್ನು ಬುದ್ಧಿವಂತಿಕೆಯಿಂದ ತೆಗೆದುಕೊಂಡು ನೀವು ನಿಮ್ಮ ಉದ್ಯಮವನ್ನು ಪ್ರಾರಂಭಿಸಬಹುದು. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7.30 ರವರೆಗೆ.
ಕುಂಭ ರಾಶಿ:- ನಿಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಂಡ ರೆ ನಿಮಗೆ ಬರುವ ಅನೇಕ ತೊಂದರೆಗಳನ್ನು ನೀವು ದೂರ ಮಾಡಿಕೊಳ್ಳ ಬಹುದು. ನಿಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ವಹಿಸಬೇಕು. ನೀವು ಮಾಡುತ್ತಿರುವ ಕೆಲಸದಲ್ಲಿ ಶೀಘ್ರದಲ್ಲೇ ಪ್ರತಿಫಲ ಕಾಣಬಹುದು. ಜೊತೆಗೆ ನಿಮ್ಮ ಆದಾಯ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಿಗ್ಗೆ 6:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ.
ಮೀನ ರಾಶಿ:- ಕೆಲಸದ ಜೊತೆ ನಿಮ್ಮ ಆರೋಗ್ಯದ ಕಡೆಯೂ ಕೂಡ ಹೆಚ್ಚಿನ ಗಮನ ವಹಿಸಬೇಕಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಈ ದಿನ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಪ್ರೀತಿ ಪಾತ್ರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 9:00 ಗಂಟೆಯವರೆಗೆ.